ಹಾಳು ಮೊರಡಿಗಳಲ್ಲಿ ಊರ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾಳು ಮೊರಡಿಗಳಲ್ಲಿ ಊರ ದಾರಿಗಳಲ್ಲಿ ಕೆರೆ ಬಾವಿ ಹೂಗಿಡು ಮರಂಗಳಲ್ಲಿ ಗ್ರಾಮಮಧ್ಯಂಗಳಲ್ಲಿ ಜಲಪಥ ಪಟ್ಟಣಪ್ರವೇಶದಲ್ಲಿ ಹಿರಿಯಾಲದ ಮರದಲ್ಲಿ ಮನೆಯ ಮಾಡಿ
ಕರೆವೆಮ್ಮೆಯ ಹಸುಗೂಸು ಬಸುರಿ ಬಾಣಂತಿ ಕುಮಾರಿ ಕೊಡಗೂಸು ಎಂಬವರ ಹಿಡಿದುಂಬ ತಿರಿದುಂಬ ಮಾರಯ್ಯ ಬೀರಯ್ಯ ಕೇಚರಗಾವಿಲ ಅಂತರಬೆಂತರ ಕಾಳಯ್ಯ ಮಾರಯ್ಯ ಮಾಳಯ್ಯ ಕೇತಯ್ಯಗಳೆಂಬ ನೂರು ಮಡಕೆಗೆ ನಮ್ಮ ಕೂಡಲಸಂಗಮದೇವ ಶರಣೆಂಬುದೊಂದೆ ದಡಿ ಸಾಲದೆ