ಹಾಳೂರೊಳಗೊಂದು ಮನೆಯ ಮಾಡಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಾಳೂರೊಳಗೊಂದು ಮನೆಯ ಮಾಡಿ ಬದುಕ ಹೋದಡೆ
ಕಾಳೋರಗ ಬಂದು ಕಡಿಯಿತ್ತು ನೋಡಾ ! ಕೇರಿ ಕೇರಿಯೊಳಗೆಲ್ಲಾ ಹರಿದಾಡುತ್ತಿದ್ದವು
ಮಾರಿಯ ತೋರದ ಮದಗಜಂಗಳು. ಚಿತ್ರಗುಪ್ತನ ಕೈಯ ಚಿತ್ರವ ತಿಳಿದು ನೋಡಿದಡೆ
ಹಾಳೂರು ಹಾಳಾಯಿತ್ತು ಗುಹೇಶ್ವರಾ !