ಹಾವಿನ ಬಾಯ ಕಪ್ಪೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾವಿನ ಬಾಯ ಕಪ್ಪೆ ಹಸಿದು ಹಾರುವ ನೊಣಕ್ಕೆ ಆಸೆಮಾಡುವಂತೆ
ಶೂಲವನೇರುವ ಕಳ್ಳನು ಹಾಲು ತುಪ್ಪವ ಕುಡಿದು ಮೇಲೇಸುಕಾಲ ಬದುಕುವನೊ ಕೆಡುವೊಡಲ ನಚ್ಚಿ
ಕಡುಹುಸಿಯನೆ ಹುಸಿದು
ಒಡಲ ಹೊರೆವರ ಕೂಡಲಸಂಗಮದೇವಯ್ಯನೊಲ್ಲ
ಕಾಣಿರಣ್ಣಾ. 130