ಹಾವಿನ ಹಲ್ಲ ಕಳೆದು
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ ಹಾವಿನ ಸಂಗವೆ ಲೇಸು ಕಂಡಯ್ಯಾ. ಕಾಯದ ಸಂಗವ ವಿವರಿಸಬಲ್ಲಡೆ ಕಾಯದ ಸಂಗವೆ ಲೇಸು ಕಂಡಯ್ಯಾ. ತಾಯಿ ರಕ್ಕಸಿಯಾದಂತೆ ಕಾಯವಿಕಾರವು. ಚೆನ್ನಮಲ್ಲಿಕಾರ್ಜುನಯ್ಯಾ
ನೀನೊಲಿದವರು ಕಾಯಗೊಂಡಿದ್ದರೆನಬೇಡ.