ಹಾವಿನ ಹೆಡೆಗಳ ಕೊಂಡು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾವಿನ ಹೆಡೆಗಳ ಕೊಂಡು ಕೆನ್ನೆಯ ತುರಿಸುವಂತೆ
ಉರಿಯ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ
ಹುಲಿಯ ಮೀಸೆಯ ಹಿಡಿದುಕೊಂಡು ಒಲಿದುಯ್ಯಲನಾಡುವಂತೆ
ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದಡೆ ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ.