ಹಾಸುಹೊಕ್ಕಿನಠಾವ ದಾಸಯ್ಯ ಬಲ್ಲ. ಉಂಬ ಉಡುವ (ಊಡುವ ?) ಠಾವ ಸಿರಿಯಾಳ ಬಲ್ಲ. ಕೊಂಬ ಕೊಡುವ ಠಾವ ಬಲ್ಲಾಳ ಬಲ್ಲ. ಲಿಂಗ ಜಂಗಮದ ಠಾವ ಬಸವಣ್ಣ ಬಲ್ಲ. ರುಚಿಯಠಾವ ಬಂಕಯ್ಯ ಬಲ್ಲ. ನಮ್ಮ ಗುಹೇಶ್ವರನ ನಿಲವ ಸೊನ್ನಲಿಗೆಯ ಸಿದ್ಧರಾಮಯ್ಯನೆ ಬಲ್ಲ