ಹಿಂಡನಗಲಿ ಹಿಡಿವಡೆದ ಕುಂಜರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಿಂಡನಗಲಿ ಹಿಡಿವಡೆದ ಕುಂಜರ ತನ್ನ ವಿಂಧ್ಯವ ನೆನೆವಂತೆ ನೆನೆವೆನಯ್ಯಾ. ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೆನೆವೆನಯ್ಯಾ ಕಂದಾ
ನೀನಿತ್ತ ಬಾ ಎಂದು ನೀವು ನಿಮ್ಮಂದವ ತೋರಯ್ಯಾ
ಚೆನ್ನಮಲ್ಲಿಕಾರ್ಜುನಾ.