ಹಿಂದಣ ಅನಂತವನೂ, ಮುಂದಣ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹಿಂದಣ ಅನಂತವನೂ
ಮುಂದಣ ಅನಂತವನೂ ಒಂದು ದಿನ ಒಳಕೊಂಡಿತ್ತು ನೋಡಾ ! ಒಂದು ದಿನವನೊಳಕೊಂಡು ಮಾತಾಡುವ ಮಹಂತನ ಕಂಡು ಬಲ್ಲವರಾರಯ್ಯ ? ಆದ್ಯರು ವೇದ್ಯರು ಅನಂತ ಹಿರಿಯರು
ಲಿಂಗದಂತುವನರಿಯದೆ ಅಂತೆ ಹೋದರು ಕಾಣಾ ಗುಹೇಶ್ವರಾ !