ಹಿಂದೆ ಎನ್ನ ಗುರುವನುಮಿಷಂಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಿಂದೆ ಎನ್ನ ಗುರುವನುಮಿಷಂಗೆ ನೀನು ಲಿಂಗವ ಕೊಟ್ಟೆನೆಂಬ ಸೂತಕ ಬೇಡ
ಅಂದು ಅನುಮಿಷ ನಿನ್ನ ಕೈಯಲ್ಲಿ ಕೊಂಡನೆಂಬ ಸಂಕಲ್ಪ ಬೇಡ
ಹಿಂದು ಮುಂದೆಂಬ ಸಂದಳಿದು ನಿಂದಲ್ಲಿ ಭರಿತನಾದ ಬಳಿಕ ಕೊಡಲುಂಟೆ
ಕೊಳಲುಂಟೆ ಹೇಳಾ ! ಹಿಡಿದಡೆ ಸಿಕ್ಕದು
ಕೊಡುವಡೆ ಹೋಗದು
ಎಡೆಯಾಟದ ಜೀವಪರಿಯೆಂತಯ್ಯಾ ಲಿಂಗವ ಹೋಗಾಡಿದನೆಂಬ ನಿಂದೆಯ ಪ್ರಮಥರು ನುಡಿವುತ್ತಿರಲು ಲಿಂಗೈಕ್ಯವೆಂತಪ್ಪುದು ಹೇಳಾ ! ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು
ಎನ್ನ ಮನ ಮನ ತಾರ್ಕಣೆಯಪ್ಪಂತೆ ನಿಮ್ಮಲ್ಲೈಕ್ಯವ ಮಾಡಾ
ಕೂಡಲಸಂಗಮದೇವಾ.