ವಿಷಯಕ್ಕೆ ಹೋಗು

ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ.

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. ತಡೆವೆನೆಂದಡೆ ಮೀರಿ ಹೋಹನವ್ವಾ. ಒಪ್ಪಚ್ಚಿ ಅಗಲಿದಡೆ ಕಳವಳಗೊಂಡೆ. ಚೆನ್ನಮಲ್ಲಿಕಾರ್ಜುನನ ಕಾಣದೆ ಆನಾರೆಂದರಿಯೆ ಕೇಳಾ
ತಾಯೆ.