ಹಿರಿದಪ್ಪ ಜಲಧಿಯ ಮಡುವಿನೊಳಗೆ ಕರಿಯ ಕಬ್ಬಿಲ ಜಾಲವ ಬೀಸಿದ ನೋಡಯ್ಯಾ. ಅರಿದ ತಲೆ ಐದು ಅರಿಯದ ತಲೆ ಐದು ಕರಿಯ ತಲೆ ಐದು ಮುಂದೈದಾವೆ ನೋಡಯ್ಯಾ. ಕರಿಯ ಕಬ್ಬಿಲ ಜಾಲವ ಹೊತ್ತುಕೊಂಡು ಹೋದಡೆ ನೇತ್ರದಲೋಕುಳಿಯಾಡಿತ್ತ ಕಂಡೆನು ಗುಹೇಶ್ವರಾ.