ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ
ಬೆಳೆದೆನು ಅಸಂಖ್ಯಾತರ ಕರುಣದೊಳಗೆ. ಭಾವವೆಂಬ ಹಾಲು
ಸುಜ್ಞಾನವೆಂಬ ತುಪ್ಪ
ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ. ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ. ವಿವಾಹವ ಮಾಡಿದಿರಿ
ಸಯವಪ್ಪ ಗಂಡಂಗೆ ಕೊಟ್ಟಿರಿ
ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ. ಬಸವಣ್ಣ ಮೆಚ್ಚಲು ಒಗತನವ ಮಾಡುವೆ. ಚೆನ್ನಮಲ್ಲಿಕಾರ್ಜುನನ ಕೈವಿಡಿದು ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು. ಅವಧರಿಸಿ
ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು
ಶರಣಾರ್ಥಿ.