ಹುಟ್ಟಿದ ಕೂಸಿಂಗೆ ಪಟ್ಟವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹುಟ್ಟಿದ ಕೂಸಿಂಗೆ ಪಟ್ಟವ ಕಟ್ಟಿ
ವಿಭೂತಿಯ ಹೂಸಿ
ಲಿಂಗವ ತೋರಿ_`ಜೋಜೋ' ಎಂದು ಜೋಗುಳವಾಡಿದಳು ಮಾಯಾದೇವಿಯಕ್ಕ ! `ಜೋಜೋ' ಎಂಬ ಸರ ಹರಿದು ತೊಟ್ಟಿಲು ಬಿದ್ದಿತ್ತು
ಕೂಸು ಸತ್ತಿತ್ತು; ಗುಹೇಶ್ವರನುಳಿದನು !