ವಿಷಯಕ್ಕೆ ಹೋಗು

ಹುಟ್ಟುತ್ತ ದ್ರವ್ಯವನರಿಯದವಂಗೆ ಐಶ್ವರ್ಯವಂತ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹುಟ್ಟುತ್ತ ದ್ರವ್ಯವನರಿಯದವಂಗೆ ಐಶ್ವರ್ಯವಂತ ಮಗನಾದಡೆ ಲಕ್ಷಸಂಖ್ಯೆಯ ಹಿರಣ್ಯವ ತಂದು ಸಂತೋಷಪಡಿಸುವಂತೆ
ಕಾಳೆಗಮುಖವಾವುದೆಂದರಿಯದ ಹಂದೆ ನೃಪಂಗೆ ಒಬ್ಬ ಕ್ಷತ್ರಿಯನಹ ಕುಮಾರ ಹುಟ್ಟಿ
ಕಿಗ್ಗಡಲ ರಕ್ತದ ಹೊನಲಲ್ಲಿ ಕಡಿದು ಮುಳುಗಾಡುವ ಕೊಳುಗುಳವ ಕಂಡು ಪರಿಣಾಮಿಸುವಂತೆ ಆನು ಪರಿಣಾಮಿಸುವೆನಯ್ಯಾ
ಕೂಡಲಸಂಗಮದೇವಾ ನೀವು ಬಂದೆನ್ನ ಬೇಡಿದಡೆ.