ವಿಷಯಕ್ಕೆ ಹೋಗು

ಹುಟ್ಟೆಂದು ಲೋಕದಲ್ಲಿ ಹುಟ್ಟಿಸಿ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹುಟ್ಟೆಂದು ಲೋಕದಲ್ಲಿ ಹುಟ್ಟಿಸಿ ಇಳಿಯಬಿಟ್ಟಡೆ ನಿಮ್ಮ ನಗುವರಯ್ಯಾ. ಶಿವಬಟ್ಟೆಯಲೆನ್ನನು ಇರಿಸಯ್ಯಾ ಹರನೆ
ಹೊಲಬುಗೆಟ್ಟೆನು ಬಟ್ಟೆಯ ತೋರಯ್ಯಾ. ಹುಯ್ಯಲಿಟ್ಟೆನು
ಗಣಂಗಳು ಕೇಳಿರಯ್ಯಾ. ಕೂಡಲಸಂಗಮದೇವಯ್ಯ ಎನ್ನ ಕಾಡಿಹನಯ್ಯಾ. 63