Library-logo-blue-outline.png
View-refresh.svg
Transclusion_Status_Detection_Tool

ಹುಸಿ ಕಳವು ಪರದಾರ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಹುಸಿ ಕಳವು ಪರದಾರ ಹಿಂಸೆ ಅಧಿಕಾಶೆಗಳ ಕೂಡಿಸಿಕೊಂಡು ಇದ್ದು ಅನ್ಯ ಅನಾಚಾರದಲ್ಲಿ ವರ್ತಿಸುವವರು
ತಮ್ಮ ಅಂಗದ ಮೇಲೆ ಕಟ್ಟಿಕೊಂಡಿದ್ದ ಲಿಂಗವು ಅದು ಲಿಂಗವಲ್ಲ. ಅವರು ಮಾಡುವ ದೇವಪೂಜೆ ನಿಚ್ಚದಂಡಕ್ಕೆ ಪ್ರಾಯಶ್ಚಿತ್ತವೆಂದು ಶಿವನ ವಾಕ್ಯ ಮೊದಲಾದ ಸಕಲಪುರಾತನರ ವಚನಂಗಳು ಮುಂದೆ ಸಾರಿ ಹೇಳಿಹವು. ಅದು ಕಾರಣ_ಕೂಡಲಚೆನ್ನಸಂಗಯ್ಯಾ ಪ್ರಾಣಲಿಂಗದ ಸಂಬಂಧವಾದ ಸದ್ಭಕ್ತನು ಅನ್ಯಾಯ ಅನಾಚಾರದಲ್ಲಿ ವರ್ತಿಸುವವರ ಬಿಟ್ಟಿಹನು