ಹೂವು ಕಂದಿದಲ್ಲಿ ಪರಿಮಳವನರಸುವರೆ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೂವು ಕಂದಿದಲ್ಲಿ ಪರಿಮಳವನರಸುವರೆ ? ಕಂದನಲ್ಲಿ ಕುಂದನರಸುವರೆ ? ಎಲೆ ದೇವ
ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೆ ? ಎಲೆ ದೇವ
ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ ? ಕೇಳಯ್ಯಾ
ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು?