ಹೂವ ಕೊಯ್ಯ ಹೋದಡೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೂವ ಕೊಯ್ಯ ಹೋದಡೆ
ಹೂವಿನ ಮೇಲೊಂದು ಗಿಡ ಹುಟ್ಟಿತ್ತು. ಹೂವಿನ ಸೊಂಪುವನಾರೂ ಕಂಡವರಿಲ್ಲ. ಹೂವಿನ ಗುಂಪವನಾರೂ ಬಲ್ಲವರಿಲ್ಲ. ಹೂವ ಕೊಯ್ಯದೆ ಗಿಡವ ಕಡಿಯದೆ ನೇಮ ಸಂದುದು ಗುಹೇಶ್ವರಾ.