ಹೂ ಕೊಯ್ಯಹೋದಡೆ ಹೂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೂ ಕೊಯ್ಯಹೋದಡೆ ಹೂ ದೊರಕೊಳ್ಳದು. ಅಗ್ಘವಣಿಯ ತುಂಬುವಡೆ ಅಗ್ಘವಣಿ ತುಂಬದು. ಪೂಜಿಸ ಹೋದಡೆ ಪೂಜೆ ನೆಲೆಗೊಳ್ಳದು._ ಇದೇನು ಸೋಜಿಗವೊ ಅಯ್ಯಾ ! ಅರಿದು ಮರೆದವನಲ್ಲ
ಬೆರಗು ಹಿಡಿದವನಲ್ಲ. ಗುಹೇಶ್ವರನೆಂಬ ಬುದ್ಧಿ ಇಂತುಟು.