ಹೂ ಮಿಡಿಯ ಹರಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೂ ಮಿಡಿಯ ಹರಿದು ಒತ್ತಿ ಹಣ್ಣ ಮಾಡಿಹೆನೆಂದಡೆ ಹಣ್ಣಾಗಬಲ್ಲುದೆ ? ಪರಿಮಳವಿಲ್ಲದ ನನೆಯನರಳಿಸಿ ಮುಡಿದಹೆನೆಂದಡೆ ಸೌರಭ ಉಂಟೆ ? ಶಿವಶರಣರ ನಿಲವು ಕಾಂಬ ಕಾಲಕ್ಕೆ ಕಾಣಬಹುದಲ್ಲದೆ ಎಲ್ಲಾ ಹೊತ್ತು ಕಾಣಬಹುದೆ ? ಅಹ ಕಾಲಕ್ಕೆ ತಾನೆ ಅಪ್ಪುದು. ಗುಹೇಶ್ವರನ ಶರಣರ ನಿಲವ ಕಂಡ ಬಳಿಕ ಮರಹು
ಬೆಳಗ ಕಂಡ ಕತ್ತಲೆಯಂತೆ ನೋಡ ನೋಡ ಹರೆವುದು ನೋಡಾ ಸಂಗನಬಸವಣ್ಣಾ.