ಹೃದಯಕಮಲದೊಳಗೊಂದು ಮರಿದುಂಬಿ ಹುಟ್ಟಿತ್ತು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೃದಯಕಮಲದೊಳಗೊಂದು ಮರಿದುಂಬಿ ಹುಟ್ಟಿತ್ತು
ಹಾರಿಹೋಗಿ ಆಕಾಶವ ನುಂಗಿತ್ತಯ್ಯಾ ! ಆ ತುಂಬಿಯ ಗರಿಯ ಗಾಳಿಯಲ್ಲಿ
ಮೂರು ಲೋಕವೆಲ್ಲವೂ ತಲೆಕೆಳಗಾಯಿತ್ತು ! ಪಂಚ ವರ್ಣದ ಹಂಸೆಯ ಪಂಜರವ ಖಂಡಿಸಿದಡೆ
ಗರಿ ಮುರಿದು
ತುಂಬಿ ನೆಲಕ್ಕುರುಳಿತ್ತು! ನಿಜದುದಯದ ಬೆಡಗಿನ ಕೀಲ
ಗುಹೇಶ್ವರಾ
ನಿಮ್ಮ ಶರಣರ ಅನುಭವಸಂಗದಲ್ಲಿರ್ದು ಕಂಡೆನಯ್ಯಾ.