ವಿಷಯಕ್ಕೆ ಹೋಗು

ಹೆಂಡಿರು ಮಕ್ಕಳಿಗೆ ಕುಲದೈವ ಮನೆದೈವವಲ್ಲದೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಹೆಂಡಿರು_ಮಕ್ಕಳಿಗೆ ಕುಲದೈವ ಮನೆದೈವವಲ್ಲದೆ ಎನಗೆ ಕುಲದೈವ ಮನೆದೈವವಿಲ್ಲೆಂಬ ಭಂಡನ ಭಕ್ತಿಯ ಪರಿಯ ನೋಡಾ. [ಆ] ಯುಕ್ತಿಶೂನ್ಯಂಗೆ ಮುಂದೆ ದೃಷ್ಟವ ಹೇಳಿಹೆನು: ತನ್ನ ಹೆಂಡತಿ ಮತ್ತೊಬ್ಬನ ಮೆಚ್ಚಿಕೊಂಡು ಹೋಗುತ್ತಿರೆ
ಹೋದರೆ ಹೋಗಲಿ ಎಂದು ಸೈರಿಸಬಲ್ಲಡೆ ತಾನವರೊಳಗಲ್ಲ. ಅಕಟಕಟಾ ಲೌಕಿಕಕ್ಕೆ ಆಜ್ಞೆಯುಂಟು ಪಾರಮಾರ್ಥಕ್ಕೆ ಆಜ್ಞೆಯಿಲ್ಲವೆ ! ಇದು ಕಾರಣ_ಕೂಡಲಚೆನ್ನಸಂಗಯ್ಯಾ ಭಕ್ತನಾಗಿ ಭವಿಯ ಬೆರಸುವ ಅನಾಚಾರಿಯ ತೋರದಿರಯ್ಯಾ.