ಹೆದರದಿರು ಮನವೆ, ಬೆದರದಿರು
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹೆದರದಿರು ಮನವೆ
ಬೆದರದಿರು ತನುವೆ
ನಿಜವನರಿತು ನಿಶ್ಚಿಂತನಾಗಿರು. ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ
ಎಲವದಮರನ ಇಡುವರೊಬ್ಬರ ಕಾಣೆ. ಭಕ್ತಿಯುಳ್ಳವರ ಬೈವರೊಂದುಕೋಟಿ
ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ. ನಿಮ್ಮ ಶರಣರ ನುಡಿಯೆ ಎನಗೆ ಗತಿ
ಸೋಪಾನ
ಚೆನ್ನಮಲ್ಲಿಕಾರ್ಜುನಾ.