ಹೊಟ್ಟೆಯ ಮೇಲೆ ಕಟ್ಟೋಗರದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೊಟ್ಟೆಯ ಮೇಲೆ ಕಟ್ಟೋಗರದ ಮೊಟ್ಟೆಯ ಕಟ್ಟಿದಡೇನು? ಹಸಿವು ಹೋಹುದೆ? ಅಂಗದ ಮೇಲೆ ಲಿಂಗಸ್ವಾಯತವಾದಡೇನು? ಭಕ್ತನಾಗಬಲ್ಲನೆ? ಇಟ್ಟ ಕಲ್ಲು ಮೆಳೆಯ ಮೇಲೆ ಸಿಲುಕಿದಡೆ
ಆ ಕಲ್ಲು ಲಿಂಗವೆ? ಆ ಮೆಳೆ ಭಕ್ತನೆ? ಇಟ್ಟಾತ ಗುರುವೆ? ಇಂತಪ್ಪವರ ಕಂಡಡೆ ನಾಚುವೆನಯ್ಯಾ_ಗುಹೇಶ್ವರಾ.