ಹೊಯಿದವರೆನ್ನ ಹೊರೆದವರೆಂಬೆ, ಬಯಿದವರೆನ್ನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊಯಿದವರೆನ್ನ ಹೊರೆದವರೆಂಬೆ
ಬಯಿದವರೆನ್ನ ಬಂಧುಗಳೆಂಬೆ
ನಿಂದಿಸಿದವರೆನ್ನ ತಂದೆತಾಯಿಗಳೆಂಬೆ
ಆಳಿಗೊಂಡವರೆನ್ನ ಆಳ್ದವರೆಂಬೆ
ಜರಿದವರೆನ್ನ ಜನ್ಮಬಂಧುಗಳೆಂಬೆ
ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ ಕೂಡಲಸಂಗಮದೇವಾ.