ಹೊರಗನೆ ಹಾರೈಸಿ ಹೊರಗಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೊರಗನೆ ಹಾರೈಸಿ ಹೊರಗಣ ಸದಾಚಾರ ಕ್ರಿಯೆಗಳ
ಮನಮುಟ್ಟಿ ಮಾಡುತ್ತಿರಲು; ಇದೆಲ್ಲಿಯ ಹೊರಗಣಸುಖವೆಂದು
ಸುವಿಚಾರ ಕಣ್ದೆರೆದು ನೋಡಲು ಕನ್ನಡಿಯೊಳಗಣ ರೂಪ ತಾನೆಂದರಿವಂತೆ ಮೆಲ್ಲಮೆಲ್ಲನೆ ಒಳಗೆ ಅಡಗಿತ್ತಯ್ಯಾ. ಲಿಂಗಸುಖದ ಸುಗ್ಗಿಯಲ್ಲಿ ಎನ್ನ ಪ್ರಾಣ ಮನ ಕರಣಂಗಳು ಮೇರೆದಪ್ಪಿದ ಸುಖಸಮುದ್ರದೊಳಗೋಲಾಡಿದಂತಾದೆನಯ್ಯಾ ! ಮುಳುಗಿದೆನಯ್ಯಾ
ಸ್ವಾನುಭಾವವೆಂಬ ಗುರುವಿನ ಕರುಣದಲ್ಲಿ. ಇಂತಾದ ಬಳಿಕ ಕೂಡಲಚೆನ್ನಸಂಗಯ್ಯನೆ ಪ್ರಾಣವಾಗಿದ್ದನಯ್ಯಾ.