ಹೊರಗೆ ವೇಷದ ಸೊಂಪು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೊರಗೆ ವೇಷದ ಸೊಂಪು ಒಳಗೆ ರೋಷದ ಮೊಟ್ಟೆಯಯ್ಯ. ಅಶನವನಿಕ್ಕಿ ಹಣವ ಕೊಡದವರ ಕಂಡರೆ ಶಾಪಿಸಿ ಕೋಪಿಸಿ ಪಾಪಿಗಳೆಂಬಿರಯ್ಯ. ನಿಮ್ಮ ಕಿಚ್ಚಿಗೆ ಸಾಪಿಸಿ ಕೋಪಿಸಿ ಹೊಯಿದು ಕುತಾಪಿಸುವವರು ನೀವು ಪಾಪಿಗಳಲ್ಲದೆ
ಅವರು ಪಾಪಿಗಳೇ ತಿಳಿದು ನೋಡಿರಯ್ಯ. ಜಗದ ಕರ್ತನ ವೇಷಧರಿಸಿ ಕರ್ತೃ ನೀವಾದ ಬಳಿಕ ಮಾನವರು ಕೊಟ್ಟಾರು ಕೊಂಡಾರು ಎಂಬ ಭ್ರಾಂತಿಯೇಕೆ? ಅರೆಮರುಳಗಳಿರಾ
ಕೊಡುವಾತ ಶಿವನೆಂದರಿಯದ ಉದರ ಘಾತಕ ಖುಲ್ಲರನೊಲ್ಲ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.