ಹೊಲಬುಗೆಟ್ಟ ಶಿಶು ತನ್ನ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹೊಲಬುಗೆಟ್ಟ ಶಿಶು ತನ್ನ ತಾಯ ಬಯಸುವಂತೆ
ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ
ಬಯಸುತ್ತಿರ್ದೆನಯ್ಯಾ ನಿಮ್ಮ ಶರಣರ ಬರವನು. ಬಯಸುತ್ತಿರ್ದೆನಯ್ಯಾ ನಿಮ್ಮ ಭಕ್ತರ ಬರವನು. ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ ಎನಗೆ ನಿಮ್ಮ ಶರಣರ ಬರವು
ಕೂಡಲಸಂಗಮದೇವಾ. 366