ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ಕುಲವುಂಟೆ ಜಂಗಮವಿದ್ದೆಡೆಯಲ್ಲಿ ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಷ್ಕಳಂಕ ನಿಜೈಕ್ಯ ತ್ರಿವಿಧನಿರ್ಣಯ ಕೂಡಲಸಂಗಮದೇವಾ ನಿಮ್ಮ ಶರಣರಿಗಲ್ಲದಿಲ್ಲ.