ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಊ
ಗೋಚರ
ಊ ಕನ್ನಡ ವರ್ಣಮಾಲೆಯಲ್ಲಿ ಆರನೆಯ ಅಕ್ಷರ. ಸ್ವರ. ಸ್ವತಂತ್ರವಾಗಿ ಪ್ರಾಚೀನ ಶಾಸನಗಳಲ್ಲಿ ದೊರಕುವುದು ಬಹು ವಿರಳ. ಆದುದರಿಂದ ವಿಕಾಸವನ್ನು ಗಮನಿಸುವುದು ಕಷ್ಟ. ವ್ಯಂಜನಗಳ ಜೊತೆಗೆ ಸೇರಿಕೊಂಡಾಗ ಎರಡು ಸಣ್ಣರೇಖೆಗಳನ್ನು ವ್ಯಂಜನದ ಕೆಳಗೆ ಇಲ್ಲವೇ ಪಕ್ಕದಲ್ಲಿ ಬರೆಯುವುದರಿಂದ ಇದು ಸೂಚಿತವಾಗುತ್ತಿತ್ತು. ಅಶೋಕನ ಕಾಲದ ಬ್ರಾಹ್ಮೀಲಿಪಿಯಲ್ಲಿ ಇದನ್ನು ಕಾಣಬಹುದು. ಕಾಲಕ್ರಮದಲ್ಲಿ ಎರಡು ಕೊಂಡಿಗಳನ್ನು ಅಕ್ಷರದ ಪಕ್ಕದಲ್ಲಿ ಬರೆಯುವ ಪ್ರವೃತ್ತಿ ರೂಢಿಸಿತು. ಈ ಅಕ್ಷರ ಪಶ್ಚಸಂವೃತ ಗೋಲ ದೀರ್ಘಸ್ವರಧ್ವನಿಯನ್ನು ಸೂಚಿಸುತ್ತದೆ. (ಎ.ವಿ.ಎನ್.)